Eastern Railway Recruitment 2025 : ಈಸ್ಟರ್ನ್ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Eastern Railway Recruitment 2025 : Details of Vacancies
ಹುದ್ದೆ :
ಅಪ್ರೆಂಟಿಸ್
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 3115 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ವಯೋಮಾನ :
ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಉದ್ಯೋಗ ಮಾಹಿತಿ : Indian Bank Recruitment 2025 – ಯಾವುದೇ ಪದವಿ ಪಾಸ್……..1500 ಇಂಡಿಯನ್ ಬ್ಯಾಂಕ್ ನೇಮಕಾತಿ 2025
ಆಯ್ಕೆ ವಿಧಾನ :
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಇತರೆ ಮಾಹಿತಿ :
ಈಸ್ಟರ್ನ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ಫಿಟ್ಟರ್, ವೆಲ್ಡರ್ (ಜಿ&ಇ), ಮೆಕ್ಯಾನಿಕ್ (ಮೋಟಾರ್ ವೆಹಿಕಲ್), ಮೆಕ್ಯಾನಿಕ್ (ಡಿಸೇಲ್), ಮಶಿನಿಸ್ಟ್, ಕಾರ್ಪೆಂಟರ್, ಪೇಂಟರ್, ಲೈನ್ ಮ್ಯಾನ್ (ಜನರಲ್), ವಯರ್ ಮ್ಯಾನ್, ರೆಫ್ರಿಜರೇಷನ್ & ಎಸಿ ಮೆಕ್ಯಾನಿಕ್, ಇಲೆಕ್ಟ್ರಿಷಿಯನ್, ಎಂಎಂಟಿಎಂ, ಟರ್ನರ್, ಮೇಸನ್, ಬ್ಲಾಕಸ್ಮಿಥ್, ರೆಫ್ರಿಜರೇಷನ್ & ಏರ್ ಕಂಡೀಷನಿಂಗ್ ಟ್ರೇಡ್ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ
• ಉಳಿದ ಅಭ್ಯರ್ಥಿಗಳಿಗೆ – ರೂ. 100
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 14, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 13, 2025
Eastern Railway Recruitment 2025 : Important Links
| NOTIFICATION | CLICK HERE |
| APPLY ONLINE | CLICK HERE ಆಗಸ್ಟ್ 14 ರಿಂದ ಪ್ರಾರಂಭ |
| Telegram Join Link | Click Here |
| WhatsApp Group Link | Click Here |
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ
