BSF Head Constable Recruitment 2025 – ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ 2025

Spread the love

BSF Head Constable Recruitment 2025 : ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಇದರಲ್ಲಿ ಅಗತ್ಯವಿರುವ ಹೆಡ್ ಕಾನ್ಸ್‌ಟೇಬಲ್‌ (ರೇಡಿಯೋ ಆಪರೇಟರ್, ರೇಡಿಯೋ ಮೆಕ್ಯಾನಿಕ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
BSF Head Constable Recruitment 2025 - ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ 2025

BSF Head Constable Recruitment 2025 : Details of Vacancies

ಹುದ್ದೆ :

ಹೆಡ್ ಕಾನ್ಸ್‌ಟೇಬಲ್‌ (ರೇಡಿಯೋ ಆಪರೇಟರ್, ರೇಡಿಯೋ ಮೆಕ್ಯಾನಿಕ್)

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 1121 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಹೆಡ್ ಕಾನ್ಸ್‌ಟೇಬಲ್‌ (ರೇಡಿಯೋ ಆಪರೇಟರ್)910
ಹೆಡ್ ಕಾನ್ಸ್‌ಟೇಬಲ್‌ (ರೇಡಿಯೋ ಮೆಕ್ಯಾನಿಕ್)211

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 ರಿಂದ ರೂ. 81,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ವಿಷಯದಲ್ಲಿ ಶೇಕಡಾ 60% ಅಂಕಗಳೊಂದಿಗೆ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿರಬೇಕು. ಅಥವಾ
10ನೇ ತರಗತಿ ಜೊತೆಗೆ 2 ವರ್ಷಗಳ ಐಟಿಐ ಇನ್ ರೇಡಿಯೋ & ಟೆಲಿವಿಷನ್/ ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್/ ಕಂಪ್ಯೂಟರ್ ಆಪರೇಟರ್ & ಪ್ರೊಗ್ರಾಮಿಂಗ್ ಅಸಿಸ್ಟಂಟ್/ ಡಾಟಾ ಪ್ರಿಪರೇಷನ್ & ಕಂಪ್ಯೂಟರ್ ಸಾಫ್ಟವೇರ್/ ಜನರಲ್ ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್/ ಡಾಟಾ ಎಂಟ್ರಿ ಆಪರೇಟರ್.

ಉದ್ಯೋಗ ಮಾಹಿತಿ : Bank of Maharashtra Recruitment 2025

ಆಯ್ಕೆ ವಿಧಾನ :

ಅಭ್ಯರ್ಥಿಗಳಿಗೆ ದೇಹದಾರ್ಢ್ಯತೆ ಪರೀಕ್ಷೆ (PST), ದೈಹಿಕ ಸಾಮರ್ಥ್ಯ ಪರೀಕ್ಷೆ (PET), ಕಂಪ್ಯೂಟರ್ ಬೇಸ್ಡ್ ಟೆಸ್ಟ್, ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ದೇಹದಾರ್ಢ್ಯತೆ ಪರೀಕ್ಷೆ (PST) –

• ಪುರುಷ ಅಭ್ಯರ್ಥಿಗಳ ಎತ್ತರ 168 ಸೆಂ.ಮೀ., ಎದೆ ಸುತ್ತಳತೆ 80-85 ಸೆಂ.ಮೀ.
• ಮಹಿಳಾ ಅಭ್ಯರ್ಥಿಗಳ ಎತ್ತರ 157 ಸೆಂ.ಮೀ.

ದೈಹಿಕ ಸಾಮರ್ಥ್ಯ ಪರೀಕ್ಷೆ (PET) –

• ಪುರುಷ ಅಭ್ಯರ್ಥಿಗಳಿಗೆ 1.6 ಕಿಲೋಮೀಟರ್ ಓಟ (6 ನಿಮಿಷ 30 ಸೆಕೆಂಡ್)
• ಮಹಿಳಾ ಅಭ್ಯರ್ಥಿಗಳಿಗೆ 800 ಮೀಟರ್ ಓಟ (4 ನಿಮಿಷ)

ವಯೋಮಾನ :

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 25 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – ಗರಿಷ್ಠ 28 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – ಗರಿಷ್ಠ 30 ವರ್ಷ

ಶುಲ್ಕ ಪಾವತಿಸುವ ವಿಧಾನ :

ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

• ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು – ರೂ. 100
• ಮಹಿಳಾ, ಪ.ಜಾತಿ, ಪ.ಪಂಗಡ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 24, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 23, 2025

BSF Head Constable Recruitment 2025 : Important Links

NOTIFICATIONCLICK HERE
APPLY ONLINEREGISTRATION | LOGIN
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top