ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿ – Bank of baroda Recruitment 2025

Spread the love

ಬ್ಯಾಂಕ್ ಆಫ್ ಬರೋಡಾ 2700 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ನವೆಂಬರ್ 11 ರಿಂದ ಡಿಸೆಂಬರ್ 1 ರವರೆಗೆ ಪದವೀಧರರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಹತಾ ಮಾನದಂಡ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಮತ್ತು ಮಾಸಿಕ ಸ್ಟೈಫಂಡ್ ಕುರಿತು ವಿವರಗಳ ಇಲ್ಲಿದೆ. ಕರ್ನಾಟಕದಲ್ಲಿ 440 ಹುದ್ದೆಗಳಿವೆ.

WhatsApp Group Join Now
Telegram Group Join Now
Instagram Group Join Now
ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿ - Bank of baroda Recruitment 2025

ಬ್ಯಾಂಕ್ ಆಫ್ ಬರೋಡಾ ದೇಶಾದ್ಯಂತ ತನ್ನ ಶಾಖೆಗಳಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 2,700 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ನವೆಂಬರ್ 11 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ರಾಜ್ಯವಾರು ಹುದ್ದೆಗಳ ವಿವರಗಳು:

  • ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ: 440
  • ತೆಲಂಗಾಣದಲ್ಲಿ ಹುದ್ದೆಗಳ ಸಂಖ್ಯೆ: 154
  • ಆಂಧ್ರಪ್ರದೇಶದಲ್ಲಿ ಹುದ್ದೆಗಳ ಸಂಖ್ಯೆ: 38
  • ತಮಿಳುನಾಡಿನಲ್ಲಿ ಹುದ್ದೆಗಳ ಸಂಖ್ಯೆ: 159
  • ದೆಹಲಿಯಲ್ಲಿ ಹುದ್ದೆಗಳ ಸಂಖ್ಯೆ: 119
  • ಕೇರಳದಲ್ಲಿ ಹುದ್ದೆಗಳ ಸಂಖ್ಯೆ: 52
  • ಛತ್ತೀಸ್‌ಗಢದಲ್ಲಿ ಹುದ್ದೆಗಳ ಸಂಖ್ಯೆ: 48
  • ಗೋವಾದಲ್ಲಿ ಹುದ್ದೆಗಳ ಸಂಖ್ಯೆ: 10

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 20 ರಿಂದ 28 ವರ್ಷಗಳ ನಡುವೆ ಇರಬೇಕು. SC ಮತ್ತು ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಈ ಅರ್ಹತೆಗಳನ್ನು ಹೊಂದಿರುವ ಯಾರಾದರೂ ಡಿಸೆಂಬರ್ 1 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಸಾಮಾನ್ಯ, OBC ಮತ್ತು EWS ಅಭ್ಯರ್ಥಿಗಳು ತಲಾ 800 ಮತ್ತು PWBD ಅಭ್ಯರ್ಥಿಗಳು ತಲಾ 400 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. SC ಮತ್ತು ST ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಅಂತಿಮ ಆಯ್ಕೆಯು ಆನ್‌ಲೈನ್ ಲಿಖಿತ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಯನ್ನು ಆಧರಿಸಿರುತ್ತದೆ. ಆಯ್ಕೆಯಾದವರಿಗೆ ತಿಂಗಳಿಗೆ 15,000 ರೂ. ಸ್ಟೈಫಂಡ್ ನೀಡಲಾಗುತ್ತದೆ.

ಪ್ರಮುಖ ಸೂಚನೆಗಳು:
ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top