ಬೆಂಗಳೂರು: ಇಂಜಿನಿಯರಿಂಗ್ ಪದವೀಧರರು ಕರ್ನಾಟಕದಲ್ಲಿ ಒಂದು ಪ್ರತಿಷ್ಠಿತ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಲು ಇಚ್ಛಿಸಿದ್ದರೆ ನಿಮಗೆ ಇಲ್ಲಿದೆ ಸುವರ್ಣ ಅವಕಾಶ. ಭಾರತೀಯ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ (DRDO) ಭಾಗವಾಗಿರುವ ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್ (CABS) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ವಿವಿಧ ಹುದ್ದೆಗಳು ಖಾಲಿ ಇದ್ದು, ಯಾರೆಲ್ಲ ಸ್ಥಳೀಯವಾಗಿ ಉದ್ಯೋಗ ಪಡೆಯಬೇಕೆನ್ನು ಹಂಬಲ ಇದೆಯೋ ಅಂಥವರು ಈ ಕೂಡಲೇ ಅಗತ್ಯ ದಾಖಲೆಗಳ ಸಮೇತ ಅರ್ಜಿ ಸಲ್ಲಿಸಬಹುದು. ಒಟ್ಟು 10 ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳು ಖಾಲಿ ಇವೆ. ಈ ನೇಮಕಾತಿ ವಯೋಮಿತಿ, ವಿದ್ಯಾರ್ಹತೆ, ಮಾಸಿಕ ವೇತನ, ಅರ್ಜಿ ಸಲ್ಲಿಕೆ ಕೊನೆ ದಿನ, ನೇರ ಸಂದರ್ಶನ ಮಾಹಿತಿ ಇಲ್ಲಿದೆ.

ನೇಮಕಾತಿ ಪೂರ್ಣ ವಿವರ
ನೇಮಕಾತಿ ಸಂಸ್ಥೆ: DRDO ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್ (CABS)
ಹುದ್ದೆ ಹೆಸರು: ಜ್ಯೂನಿಯ್ ರಿಸರ್ಚ್ ಫೆಲೋ ಹುದ್ದೆಗಳು
ಖಾಲಿ ಹುದ್ದೆಗಳು: 10
ಪೋಸ್ಟಿಂಗ್: ಕರ್ನಾಟಕ
ಅರ್ಜಿ ಸಲ್ಲಿಕೆ ಆರಂಭ: 2026 ಜನವರಿ 22
ವಾಕ್ ಇನ್ ಇಂಟರ್‌ವ್ಯೂವ್: 2026 ಜನವರಿ 25 ಮತ್ತು 26
ವಯಸ್ಸಿನ ಮಿತಿ:
ಅರ್ಜಿ ಸಲ್ಲಿಸುವವರಿಗೆ 2025 ಡಿಸೆಂಬರ್ 31ಕ್ಕೆ ಸರಿಯಾಗಿ ಗರಿಷ್ಠ 28 ವರ್ಷ ಮೀರಿರಬಾರದು. ಜಾತಿ ಮೀಸಲಾತಿಗೆ ಅನುಗುಣವಾಗಿ ಪರಿಶಿಷ್ಟ ಜಾರಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ
ಅಭ್ಯರ್ಥಿಗಳು ಸೂಕ್ತ ದಾಖಲೆ ಸಹಿತ ಅರ್ಜಿಯನ್ನು ಡಿಆರ್‌ಡಿಓ ಅಧಿಕೃತ ವೆಬ್‌ಸೈಟ್ drdo.gov.in ಗೆ ಭೇಟಿ ನೀಡಿ. ಕೇಳಲಾದ ಮಾಹಿತಿ ನಮೂದಿಸಿ, ದಾಖಲೆ ಸ್ಕ್ಯಾನ್ ಮಾಡಿ ಅಪ್ಲೊಡ್ ಮಾಡಬೇಕು. ಅರ್ಜಿ ಸಮೂನೆ ಭರ್ತಿ ಮಾಡಬೇಕು. ಇಮೇಲ್ ಅನ್ನು jrf.rectt.cabs@gov.in ಗೆ ಕೊನೆ ದಿನದೊಳಗೆ ಕಳಹಿಸಬೇಕು. ಹೆಚ್ಚಿನ ಮಾಹಿತಿಗೆ ಈ ಜಾಲತಾಣದಲ್ಲಿ ಅಧಿಸೂಚನೆ ಡೌನ್‌ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
ಶೈಕ್ಷಣಿಕ ಅರ್ಹತೆ
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ಬಿಇ, ಬಿಟೆಕ್ ಅಥವಾ ಎಂಇ, ಎಂಟೆಕ್ ಪೂರ್ಣಗೊಳಿಸಿರಬೇಕು. ಅಂಥವರು ಅರ್ಜಿ ಸಲ್ಲಿಸಲು ಅರ್ಹರು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ವಿಧಾನ,
ಮಾಸಿಕ ವೇತನ ಅಧಿಸೂಚನೆಯಲ್ಲಿ ತಿಳಿಸಿರುವಂತೆ ವಾಕ್ ಇನ್ ಇಂಟರ್‌ವ್ಯೂವ್ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಆದವರಿಗೆ ಮಾಸಿಕ 37,000 ಮಾಸಿಕ ವೇತನ ನೀಡಲಾಗುತ್ತದೆ.
ಪ್ರಮುಖ ಸೂಚನೆಗಳು:
ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
