1828 ಅಗ್ನಿಶಾಮಕ ಹುದ್ದೆಗಳ ಬೃಹತ್ ಅಧಿಸೂಚನೆ! – KSFES ನೇಮಕಾತಿ – KSFES Recruitment 2026

Spread the love

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು (KSFES) 1,828 ಹುದ್ದೆಗಳಿಗೆ ಬೃಹತ್ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ‘ಅಗ್ನಿಶಾಮಕ ನಿರ್ವಾಹಕ’ ಸೇರಿದಂತೆ ಚಾಲಕ, ತಂತ್ರಜ್ಞ ಹುದ್ದೆಗಳಿಗೆ 10ನೇ ತರಗತಿ, ಪಿಯುಸಿ ಅಥವಾ ಪದವೀಧರರು ಅರ್ಜಿ ಸಲ್ಲಿಸಬಹುದು. ಆಕರ್ಷಕ ವೇತನ ಶ್ರೇಣಿ, ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ ಮೂಲಕ ಆಯ್ಕೆ ನಡೆಯುತ್ತದೆ. ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಇದು ಸುವರ್ಣಾವಕಾಶವಾಗಿದೆ.

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು (KSFES) ಶೀಘ್ರದಲ್ಲೇ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಿದೆ. ಒಟ್ಟು 1,828 ಹುದ್ದೆಗಳಿಗೆ ಅಧಿಸೂಚನೆ ಹೊರಬೀಳಲಿದ್ದು, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ. ವಿಶೇಷವೆಂದರೆ, ಇಲಾಖೆಯು ಅಗ್ನಿಶಾಮಕ ಸಿಬ್ಬಂದಿ, ಚಾಲಕ ಮತ್ತು ತಂತ್ರಜ್ಞ ಹುದ್ದೆಗಳನ್ನು ವಿಲೀನಗೊಳಿಸಿ ‘ಅಗ್ನಿಶಾಮಕ ನಿರ್ವಾಹಕ’ ಎಂಬ ಹೊಸ ಶ್ರೇಣಿಯನ್ನು ಸೃಷ್ಟಿಸಿದೆ.

ಖಾಲಿಯಿರುವ ಹುದ್ದೆಗಳ ವಿವರ :

ಅಗ್ನಿಶಾಮಕ ಸಿಬ್ಬಂದಿಗೆ ಅತಿ ಹೆಚ್ಚು ಅಂದರೆ : 1,502 ಹುದ್ದೆಗಳು.

ಎಂಜಿನ್ ಚಾಲಕರು : 294 ಹುದ್ದೆಗಳು

ಚಾಲಕ ತಂತ್ರಜ್ಞ : 32ಹುದ್ದೆಗಳು

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,500 ರಿಂದ ರೂ. 83,700 ರವರೆಗಿನ ವೇತನ ನೀಡಲಾಗಿದೆ.

ಕರ್ತವ್ಯ ಸ್ಥಳ :

ಕರ್ನಾಟಕದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಈ ಉದ್ಯೋಗಿಗಳು ಕರ್ತವ್ಯ ನಿರ್ವಹಿಸಬೇಕಾಗುತ್ತದೆ.

ಶೈಕ್ಷಣಿಕ ಅರ್ಹತೆ :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ 10ನೇ ತರಗತಿ, ಪಿಯುಸಿ ಅಥವಾ ರಸಾಯನಶಾಸ್ತ್ರ ವಿಷಯದಲ್ಲಿ ವಿಜ್ಞಾನ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ :

*ವಯೋಮಿತಿಯನ್ನು 18 ರಿಂದ 38 ವರ್ಷಗಳವರೆಗೆ ನಿಗದಿಪಡಿಸಲಾಗಿದೆ.

*ಸರ್ಕಾರಿ ನಿಯಮದಂತೆ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕ :

  • ಸಾಮಾನ್ಯ ವರ್ಗದವರಿಗೆ ರೂ. 250
  • ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ರೂ. 100 ಅರ್ಜಿ ಶುಲ್ಕವಿರುತ್ತದೆ.

ದೈಹಿಕ ಸಾಮರ್ಥ್ಯ :

ಅಗ್ನಿಶಾಮಕ ದಳದ ಕೆಲಸಕ್ಕೆ ದೈಹಿಕ ಸದೃಢತೆ ಅತ್ಯಗತ್ಯ. ಆದ್ದರಿಂದ ಕನಿಷ್ಠ 168 ಸೆಂ.ಮೀ ಎತ್ತರ, 50 ಕೆ.ಜಿ ತೂಕ ಮತ್ತು ಎದೆಯ ಅಳತೆ 81-86 ಸೆಂ.ಮೀ ಇರುವುದು ಕಡ್ಡಾಯವಾಗಿದೆ.

ಆಯ್ಕೆ ವಿಧಾನ :

ಲಿಖಿತ ಪರೀಕ್ಷೆಗೆ ಅದರಲ್ಲಿ ಉತ್ತೀರ್ಣರಾದವರಿಗೆ ದೈಹಿಕ ಸಹಿಷ್ಣುತೆ ಮತ್ತು ಸಾಮರ್ಥ್ಯ ಪರೀಕ್ಷೆಗಳನ್ನು (PST/PET) ನಡೆಸಿ ಅಂತಿಮವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

*ಅಧಿಕೃತ ಅಧಿಸೂಚನೆ ಪ್ರಕಟವಾದ ನಂತರ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

*ಅರ್ಜಿಯನ್ನು ಭರ್ತಿ ಮಾಡುವ ಮೊದಲು ಸರಿಯಾದ ಇಮೇಲ್ ಐಡಿ, ಫೋನ್ ಸಂಖ್ಯೆ ಮತ್ತು ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಮುಖ್ಯ.

*ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ, ಶುಲ್ಕ ಪಾವತಿಸಿದ ನಂತರ ಅರ್ಜಿಯನ್ನು ಸಲ್ಲಿಸಿ ಅದರ ಪ್ರತಿಯನ್ನು ಮುಂದಿನ ದಾಖಲಾತಿಗಳಿಗಾಗಿ ತೆಗೆದಿಟ್ಟುಕೊಳ್ಳಿ.

ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top