Karnataka High Court Group D Recruitment 2026 – ಕರ್ನಾಟಕ ಹೈಕೋರ್ಟ್ ನೇಮಕಾತಿ 2026

Spread the love

Karnataka High Court Group D Recruitment 2026 : ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಅಗತ್ಯವಿರುವ ಗ್ರೂಪ್-ಡಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now

Karnataka High Court Group D Recruitment 2026 : Details of Vacancies

ಹುದ್ದೆ :

ಜವಾನ, ಕಾವಲುಗಾರ, ಸ್ವೀಪರ್, ಜವಾನ (ಹೌಸ್ ಕೀಪಿಂಗ್), ಲಿಪ್ಟ್ ಅಟೆಂಡರ್, ಸಹಾಯಕ ಬೈಂಡರ್, ದರ್ಜಿ, ಧೋಬಿ.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 101 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಜವಾನ, ಕಾವಲುಗಾರ, ಸ್ವೀಪರ್, ಜವಾನ (ಹೌಸ್ ಕೀಪಿಂಗ್)85+8
ಲಿಪ್ಟ್ ಅಟೆಂಡರ್5
ಸಹಾಯಕ ಬೈಂಡರ್1
ದರ್ಜಿ1
ಧೋಬಿ1

ವಯೋಮಾನ :

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಅಅಭ್ಯರ್ಥಿಗಳಿಗೆ- ಗರಿಷ್ಠ 45 ವರ್ಷ

ಆಯ್ಕೆ ವಿಧಾನ :

ಅರ್ಹತಾ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಶೇಕಡಾವಾರು ಆಧಾರದ ಮೇಲೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಕರ್ತವ್ಯ ಸ್ಥಳ :

ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳನ್ನು ಬೆಂಗಳೂರಿನಲ್ಲಿನ ಪ್ರಧಾನ ಪೀಠದಲ್ಲಾಗಲೀ ಅಥವಾ ಧಾರವಾಡ ಅಥವಾ ಕಲಬುರಗಿಗಳಲ್ಲಿನ ಪೀಠಗಳಿಗೆ ನಿಯೋಜಿಸಬಹುದು.

ಶೈಕ್ಷಣಿಕ ಅರ್ಹತೆ :

ಜವಾನ, ಕಾವಲುಗಾರ, ಸ್ವೀಪರ್, ಜವಾನ (ಹೌಸ್ ಕೀಪಿಂಗ್) –1

10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಲಿಪ್ಟ್ ಅಟೆಂಡರ್ –

10ನೇ ತರಗತಿ ತೇರ್ಗಡೆ ಮತ್ತು ಲಿಪ್ಟ್ ಮೆಕ್ಯಾನಿಸಂನಲ್ಲಿ ಅನುಭವ ಹೊಂದಿರಬೇಕು.

ಸಹಾಯಕ ಬೈಂಡರ್ –

10ನೇ ತರಗತಿ ತೇರ್ಗಡೆ ಮತ್ತು ಬೈಂಡಿಂಗ್ ಕೆಲಸದಲ್ಲಿ 2 ವರ್ಷಗಳ ಅನುಭವ ಹೊಂದಿರಬೇಕು.

ದರ್ಜಿ –

10ನೇ ತರಗತಿ ತೇರ್ಗಡೆ ಮತ್ತು ದರ್ಜಿ ಕೆಲಸದಲ್ಲಿ 3 ವರ್ಷಗಳ ಅನುಭವ ಹೊಂದಿರಬೇಕು.

ಧೋಬಿ –

10ನೇ ತರಗತಿ ತೇರ್ಗಡೆ ಮತ್ತು ಧೋಬಿ ಕೆಲಸದಲ್ಲಿ ಅನುಭವ ಹೊಂದಿರಬೇಕು.

ವೇತನ :

ಹುದ್ದೆವೇತನ
ಜವಾನ, ಕಾವಲುಗಾರ, ಸ್ವೀಪರ್, ಜವಾನ (ಹೌಸ್ ಕೀಪಿಂಗ್), ಸಹಾಯಕ ಬೈಂಡರ್, ಧೋಬಿರೂ. 19,900 – ರೂ. 63,200
ಲಿಪ್ಟ್ ಅಟೆಂಡರ್, ದರ್ಜಿರೂ. 21,700 – ರೂ. 69,100

ನಿಗದಿತ ಅರ್ಜಿ ಶುಲ್ಕದ ವಿವರ :

• ಸಾಮಾನ್ಯ ಅಭ್ಯರ್ಥಿ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
• ಪ.ಜಾತಿ/ಪ.ಪಂ/ಪ್ರ.1/ಅಂಗವಿಕಲ ಅಭ್ಯರ್ಥಿಗಳು – ರೂ. 100

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.
ಹಂತ 1 : ಅರ್ಜಿ ಸಲ್ಲಿಸುವ ಮೊದಲು ಉಚ್ಛ ನ್ಯಾಯಾಲಯ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಉಚ್ಛ ನ್ಯಾಯಾಲಯದ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಎಸ್.ಬಿ.ಐ ಆನ್‌ಲೈನ್‌ ಪಾವತಿ ಗೇಟ್ ವೇ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.

Karnataka High Court Group D Recruitment 2026 : Important Links

NOTIFICATIONCLICK HERE
APPLY ONLINECLICK HERE
Telegram Join LinkClick Here
WhatsApp Group LinkClick Here

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 22, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 21, 2026
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮೇ 21, 2026

ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

  1. ↩︎


Spread the love
Scroll to Top