ಭಾರತ್ ಪೆಟ್ರೋಲಿಯಂನಲ್ಲಿ ಬೃಹತ್ ನೇಮಕಾತಿ 2026 – BPCL: ರೂ. 2,80,000/- ವೇತನ! – 20 ಜೂನ್ ಕೊನೆಯ ದಿನಾಂಕ 2026

Spread the love

ಭಾರತದ ಪ್ರತಿಷ್ಠಿತ ಇಂಧನ ಸಂಸ್ಥೆಗಳಲ್ಲಿ ಒಂದಾದ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ 2026 ನೇ ಸಾಲಿನಲ್ಲಿ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಇಂಜಿನಿಯರಿಂಗ್ ಹಾಗೂ ವೃತ್ತಿಪರ ಪದವಿ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ.

WhatsApp Group Join Now
Telegram Group Join Now

BPCL Recruitment 2026

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಟೀಮ್ ಲೀಡ್, ತಾಂತ್ರಿಕ ಅಧಿಕಾರಿ, ಕಂಪನಿ ಸೆಕ್ರೆಟರಿ ಸೇರಿದಂತೆ ಇನ್ನಿತರ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಕೇಂದ್ರ ಸರ್ಕಾರದ ಅಡಿಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

1)ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕಾ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 31-05-2026 ರಿಂದ ಆರಂಭಗೊಂಡು 20-06-2026 ಕ್ಕೆ ಕೊನೆಗೊಳ್ಳುತ್ತದೆ.

2)ಅರ್ಹ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 50,000/- ದಿಂದ 2,80,000/- ವರಗೆ ವೇತನವನ್ನು ನೀಡಲಾಗುತ್ತದೆ.

3)ಈ ಹುದ್ದೆಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಗಾಗಿ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಹುದ್ದೆಯ ಸಂಕ್ಷಿಪ್ತ ವಿವರ:

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 55 ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈ ಹುದ್ದೆಗಳನ್ನು ವಿವಿಧ ವಿಭಾಗಗಳ ಅಡಿಯಲ್ಲಿ ಹಂಚಿಕೆ ಮಾಡಲಾಗಿದೆ. ಅವುಗಳ ವಿವರ ಈ ಕೆಳಕಂಡಂತಿದೆ.

ವಿವಿಧ ವಿಭಾಗಗಳುಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಭಾರತ್ ಪೆಟ್ರೋ ರಿಸೋರ್ಸಸ್ ಲಿಮಿಟೆಡ್ಟೀಮ್ ಲೀಡ್ – ಪರಿಶೋಧನೆ02 ಹುದ್ದೆಗಳು
ಟೀಮ್ ಲೀಡ್ – ಆಸ್ತಿ ವ್ಯವಸ್ಥಾಪಕ02 ಹುದ್ದೆಗಳು
ಟೀಮ್ ಲೀಡ್ – ಜಲಾಶಯ ಇಂಜಿನಿಯರ್01 ಹುದ್ದೆಗಳು
ಕಂಪನಿ ಕಾರ್ಯದರ್ಶಿಟೀಮ್ ಲೀಡ್02 ಹುದ್ದೆಗಳು
ಟೀಮ್ ಮೆಂಬರ್02 ಹುದ್ದೆಗಳು
ಹಣಕಾಸುಟೀಮ್ ಲೀಡ್/ ಟೀಮ್ ಮೆಂಬರ್ – ಹಣಕಾಸು15 ಹುದ್ದೆಗಳು
ಪೆಟ್ರೋ ಕೆಮಿಕಲ್ಸ್ಹೆಡ್ ಸೇಲ್ಸ್ -ಪೆಟ್ರೋ ಕೆಮಿಕಲ್ ಕಾರ್ಯಪಡೆ01 ಹುದ್ದೆಗಳು
ತಾಂತ್ರಿಕ ಅಧಿಕಾರಿ – ಪಾಲಿಮರ್ ಮಾರ್ಕೆಟಿಂಗ್02 ಹುದ್ದೆಗಳು
ವೇಸೈಡ್ ಸೌಲಭ್ಯಗಳುಟೀಮ್ ಲೀಡ್ – ಹೆದ್ದಾರಿ ವಿಶ್ರಾಂತಿ ನಿಲ್ದಾಣ05 ಹುದ್ದೆಗಳು
ಸೈಟ್ ಮ್ಯಾನೇಜರ್ – ಹೆದ್ದಾರಿ ವಿಶ್ರಾಂತಿ ನಿಲ್ದಾಣ23 ಹುದ್ದೆಗಳು

ವಯೋಮಿತಿ ವಿವರ:

  • ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 35 ವರ್ಷದಿಂದ ಗರಿಷ್ಟ 50 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿಯನ್ನು 01-04-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ.

ಅರ್ಜಿ ಶುಲ್ಕ:

ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

  • ಯು.ಆರ್, ಒಬಿಸಿ (ಏನ್,ಸಿ,ಎಲ್), ಇ,ಡಬ್ಲ್ಯೂ,ಎಸ್ ಅಭ್ಯರ್ಥಿಗಳಿಗೆ: ರೂ. 1000 + 18% GST
  • SC/ST, ಪಿ.ಡಬ್ಲ್ಯೂ.ಬಿ.ಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆಯ ಹೆಸರುಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆಯ ಹೆಸರುಟೀಮ್ ಲೀಡ್, ತಾಂತ್ರಿಕ ಅಧಿಕಾರಿ, ಕಂಪನಿ ಸೆಕ್ರೆಟರಿ, ಸೈಟ್ ಮ್ಯಾನೇಜರ್ ಹಾಗೂ ವಿವಿಧ ಹುದ್ದೆಗಳು
ಹುದ್ದೆಯ ಸಂಖ್ಯೆಒಟ್ಟು 55 ಹುದ್ದೆಗಳು
ಉದ್ಯೋಗ ಸ್ಥಳಅಖಿಲ ಭಾರತ
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ20-06-2026

ಶೈಕ್ಷಣಿಕ ಅರ್ಹತೆ:

  • ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, Ph.D, ಐಸಿಡಬ್ಲ್ಯೂಎ/ಸಿಎ, ಬಿಇ/ಬಿಟೆಕ್, ಎಲ್.ಎಲ್.ಬಿ, ಎಂಬಿಎ ಹಾಗೂ ಎಂಎಸ್ಸಿ ಪದವಿ ಪೂರ್ಣಗೊಳಿಸಿರಬೇಕು.
  • ಜೊತೆಗೆ ಸಂಬಂಧಿತ ವಲಯದಲ್ಲಿ ಕನಿಷ್ಠ 7 ರಿಂದ 10 ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ವರ್ಗಗಳುವಯೋಮಿತಿ ಸಡಿಲಿಕೆ ವಿವರ
ಒಬಿಸಿ3 ವರ್ಷ
SC/ST5 ವರ್ಷ
ಮಾಜಿ ಸೈನಿಕ5 ವರ್ಷ
ಪಿಡಬ್ಲ್ಯೂಬಿಡಿ10 ವರ್ಷ

ವೇತನ ಶ್ರೇಣಿ:

  • ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರೂ. 50,000/- ದಿಂದ ರೂ. 2,80,000/- ವರೆಗೆ ವೇತನವನ್ನು ಪಡೆದುಕೊಳ್ಳಬಹುದಾಗಿದೆ.

ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ
  • ವೈಯಕ್ತಿಕ ಸಂದರ್ಶನ
  • ಉದ್ಯೋಗ ಪೂರ್ವ ವೈದ್ಯಕೀಯ ಪರೀಕ್ಷೆ

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ದಿನಾಂಕ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ31-05-2026
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ20-06-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ20-06-2026

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಹೊಸ ಬಳಕೆದಾರರಾಗಿದ್ದರೆ, ಮೂಲ ದಾಖಲೆಗಳನ್ನು ಬಳಸಿ ರಿಜಿಸ್ಟ್ರೇಷನ್ ಪ್ರೋಸೆಸ್ ಪೂರ್ಣಗೊಳಿಸಿ ನಂತರ ರೆಜಿಸ್ಟರ್ ನಂಬರ್ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
  • ನಂತರ ಅಫ್ಲಿಕೇಷನ್ ಫಾರ್ಮ್ ನಲ್ಲಿ ಶೈಕ್ಷಣಿಕ ವಿವರ, ವಯೋಮಿತಿ ವಿವರ, ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ತಾಂತ್ರಿಕ ಅಧಿಕಾರಿ, ಟೀಮ್ ಲೀಡ್ ಸೇರಿದಂತೆ ಇನ್ನಿತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಹುದ್ದೆಗೆ ಸಂಬಂಧಿಸಿದ ಅರ್ಹತೆಯನ್ನು ಖಚಿತಪಡಿಸಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಪ್ರಮುಖ ಲಿಂಕುಗಳು:

Whatsapp Group LinkClick Here
Telegram Group LinkClick Here
Website LinkClick Here

ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top