School Holiday: ಅಧಿಕ ಮಳೆಯಾಗೋ ಸಾಧ್ಯತೆ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಕಾಲೇಜ್ಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಮಂಗಳೂರು: ನಾಳೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಭಾರೀ ಮಳೆಯಾಗೋ (heavy rain) ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ (Meteorological Department) ತಿಳಿಸಿದೆ. ಅಧಿಕ ಮಳೆಯಾಗೋ ಸಾಧ್ಯತೆ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ (orange alert) ಘೋಷಿಸಲಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಕಾಲೇಜ್ಗಳಿಗೆ (schools and colleges) ನಾಳೆ ರಜೆ (Holiday) ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಅಂಗನವಾಡಿಯಿಂದ ಪಿಯುಸಿವರೆಗೆ ರಜೆ
*ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
*ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್ವಿ ಆದೇಶಿಸಿದ್ದಾರೆ.
ಈ ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಅಲರ್ಟ್
- ಚಿಕ್ಕಮಂಗಳೂರು,
- ಶಿವಮೊಗ್ಗ,
- ಧಾರವಾಡ,
- ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
- ಹಾಸನ ಅದೇ ರೀತಿ ನಾಡಿದ್ದು ಅಂದರೆ ಜುಲೈ 4 ರಂದು ಕೂಡಾ ಈ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಳೆ ಶಾಲೆ, ಕಾಲೇಜ್ಗಳಿಗೆ ರಜೆ
*ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಬೀಳುವ ಮುನ್ಸೂಚನೆ ನೀಡಲಾಗಿದೆ.
*ಹೀಗಾಗಿ ನಾಳೆ ಜಿಲ್ಲೆಯಾದ್ಯಂತ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
*ಈ ಹಿನ್ನೆಲೆಯಲ್ಲಿ ನಾಳೆ ಶಾಲೆ, ಕಾಲೇಜ್ಗಳಿಗೆ ರಜೆ ಘೋಷಿಸಲಾಗಿದೆ.
ಶಾಲೆ ನಡೆಸಿದರೆ ಕ್ರಮದ ಎಚ್ಚರಿಕೆ
1)ಇನ್ನು ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಯಿಂದ 12ನೇ ತರಗತಿವರೆಗಿನ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
2)ಜಿಲ್ಲಾಡಳಿತದ ಆದೇಶದ ವಿರುದ್ಧವಾಗಿ ತರಗತಿಗಳನ್ನು ನಡೆಸಿದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
3)ತರಗತಿ ನಡೆಸುವುದು ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಕಾನೂನು ಕ್ರಮ ಕೈಗೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲಾಧಿಕಾರಿ ದರ್ಶನ್ ಎಚ್ಚರಿಕೆ ನೀಡಿದ್ದಾರೆ.
ಇಲ್ಲೆಲ್ಲಾ ಸಾಧಾರಣ ಮಳೆ ಸಾಧ್ಯತೆ
ಜುಲೈ 8ರವರೆಗೆ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗೋ ಸಾಧ್ಯತೆ ಇದೆ. ಇನ್ನುಳಿದಂತೆ
- ಬಾಗಲಕೋಟೆ,
- ಬೀದರ್,
- ಹಾವೇರಿ,
- ಗದಗ,
- ಕಲಬುರ್ಗಿ,
- ಕೊಪ್ಪಳ,
- ರಾಯಚೂರು,
- ವಿಜಯಪುರ ಹಾಗೂ
- ಯಾದಗಿರಿ ಜಿಲ್ಲೆಗಳಲ್ಲಿ ಕೊಂಚ ಮಳೆಯಾಗಲಿದೆ.
- ಚಾಮರಾಜನಗರ,
- ದಾವಣಗೆರೆ,
- ಚಿತ್ರದುರ್ಗ,
- ಕೋಲಾರ,
- ಮಂಡ್ಯ,
- ರಾಮನಗರ,
- ತುಮಕೂರು ಹಾಗೂ
- ವಿಜಯ ನಗರ ಜಿಲ್ಲೆಗಳಲ್ಲೂ ಕೂಡಾ ಸಾಧಾರಣ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ತಿಳಿಸಿದೆ.
ಭೂಭಾಗ ತೀವ್ರ ಕುಸಿತದ ಭೀತಿ
*ಐಐಟಿ ಧಾರವಾಡದ ವೈಜ್ಞಾನಿಕ ಅಧ್ಯಯನ ಮತ್ತು ಎಐ-ಮಾದರಿಗಳ ವರದಿ ಪ್ರಕಾರ, ದಕ್ಷಿಣ ಕನ್ನಡದ ಶೇ. 24ಕ್ಕೂ ಹೆಚ್ಚು ಭೂಭಾಗ ತೀವ್ರ ಕುಸಿತದ ಭೀತಿಯಲ್ಲಿದೆ.
*ರಿಯಲ್ ಎಸ್ಟೇಟ್ ಹೆಸರಿನಲ್ಲಿ ಗುಡ್ಡಗಳನ್ನು ಬಗೆದು ಪ್ರಕೃತಿಯನ್ನು ನಾವೇ ಕೆಣಕಿದ್ದೇವೆ. ಜಿಲ್ಲಾಡಳಿತ ಈಗ 115 ಪರಿಹಾರ ಕೇಂದ್ರಗಳನ್ನು ಸಿದ್ಧಪಡಿಸಿದೆ, NDRF ತಂಡಗಳನ್ನು ನಿಯೋಜಿಸಿದೆ.
*ಆದರೆ, ಎಷ್ಟೇ ಎಚ್ಚರಿಕೆ ನೀಡಿದರೂ, ನಮ್ಮ ಮನೆ ಬಿಟ್ಟು ಬರುವುದಿಲ್ಲ ಎನ್ನುವ ಮೊಂಡುತನ ನಿಮ್ಮ ಪ್ರಾಣವನ್ನೇ ಬಲಿ ಪಡೆಯಬಹುದು.
88 ಅಪಾಯಕಾರಿ ಸ್ಥಳಗಳು
1)ದಕ್ಷಿಣ ಕನ್ನಡ ಜಿಲ್ಲೆಯ ಬರೋಬ್ಬರಿ 88 ಸ್ಥಳಗಳನ್ನು ‘ಅತಿ ಅಪಾಯಕಾರಿ ಡೇಂಜರ್ ಝೋನ್’ ಎಂದು ಗುರುತಿಸಲಾಗಿದೆ.
2)ಕಳೆದ ಐದೇ ವರ್ಷಗಳಲ್ಲಿ ಗುಡ್ಡ ಕುಸಿದು 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಈ ವರ್ಷ ಈಗಾಗಲೇ ಮೂವರು ಬಲಿಯಾಗಿದ್ದಾರೆ.
3(ಬೆಳ್ತಂಗಡಿಯ ಚಾರ್ಮಾಡಿ ಘಾಟ್, ನೆರಿಯ, ಶಿಶಿಲದಿಂದ ಹಿಡಿದು ಮಂಗಳೂರಿನ ಕೆತ್ತಿಕಲ್ ವರೆಗೂ ಮಣ್ಣಿನಡಿ ಜೀವಗಳು ಉಸಿರುಗಟ್ಟುವ ಆತಂಕ ಮನೆ ಮಾಡಿದೆ.
4)ಬಂಟ್ವಾಳ, ಪುತ್ತೂರು, ಸುಳ್ಯ, ಕಡಬ, ಉಳ್ಳಾಲದ ಅನೇಕ ಪ್ರದೇಶಗಳು ಇದೀಗ ‘ರೆಡ್ ಅಲರ್ಟ್’ನಲ್ಲಿವೆ ಎಂದು ವಿಜಯ ಕರ್ನಾಟಕ ವೆಬ್ಸೈಟ್ ವರದಿ ಮಾಡಿದೆ.
ಪ್ರಮುಖ ಸೂಚನೆಗಳು:ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
