BOB Office Assistant Recruitment 2025 : ಬ್ಯಾಂಕ್ ಆಫ್ ಬರೋಡಾದಲ್ಲಿ ಅಗತ್ಯವಿರುವ ಆಫೀಸ್ ಅಸಿಸ್ಟಂಟ್ (ಫಿಯೋನ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಹುದ್ದೆಗಳ ಸಂಖ್ಯೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BOB Office Assistant Recruitment 2025 : Details of Vacancies
ಹುದ್ದೆ : ಆಫೀಸ್ ಅಸಿಸ್ಟಂಟ್ (ಫಿಯೋನ್)
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 500 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 31 ಹುದ್ದೆಗಳು ಖಾಲಿ ಇದೆ.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ವಯೋಮಾನ : ದಿನಾಂಕ 01 ಮೇ, 2025ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 26 ವರ್ಷ ಮೀರಿರಬಾರದು.
ಶೈಕ್ಷಣಿಕ ಅರ್ಹತೆ : 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : BEL Senior Engineer Recruitment 2025
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,500 ರಿಂದ ರೂ. 37,815 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ವಯೋಮಿತಿ ಸಡಿಲಿಕೆ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಹುಬ್ಬಳ್ಳಿ/ಧಾರವಾಡ, ಮಂಗಳೂರು.
ಆಯ್ಕೆ ವಿಧಾನ : ಆನ್ಲೈನ್ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು
ಅರ್ಜಿ ಶುಲ್ಕ :
• ಸಾಮಾನ್ಯ/ ಇಡಬ್ಲ್ಯೂಎಸ್/ ಒಬಿಸಿ ಅಭ್ಯರ್ಥಿಗಳು – ರೂ. 600
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ/ ಮಹಿಳಾ ಅಭ್ಯರ್ಥಿಗಳು – ರೂ. 100
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 03, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 23, 2025
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮೇ 23, 2025
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
BOB Office Assistant Recruitment 2025 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ
