ಕೊಡಗು ಡಿಸಿಸಿ ಬ್ಯಾಂಕ್ ನೇಮಕಾತಿ 2025 – DCC Bank Recruitment 2025

Spread the love

Kodagu DCC Bank Recruitment 2025 : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಕೊಡಗು ಇದರಲ್ಲಿ ಖಾಲಿ ಇರುವ ಕಿರಿಯ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
Instagram Group Join Now

ಹುದ್ದೆ : ಕಿರಿಯ ಸಹಾಯಕರು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 32 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಕೊಡಗು ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಉದ್ಯೋಗ ಮಾಹಿತಿ : Sbi Jobs Recruitment 2025

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಶೇ 55% ಕನಿಷ್ಠ ಅಂಕಗಳಿಕೆಯ ವಾಣಿಜ್ಯೇತರ ಪದವಿ ಅಥವಾ ಶೇ 50 ಕನಿಷ್ಠ ಅಂಕಗಳಿಕೆಯ ವಾಣಿಜ್ಯ ಪದವಿ. ಡಿಪ್ಲೊಮೋ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಮತ್ತು ಸ್ನಾತಕೋತ್ತರ ಪದವೀಧರರಿಗೆ ಆದ್ಯತೆ.

ವಯೋಮಾನ : ದಿನಾಂಕ 16/01/2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಉದ್ಯೋಗ ಮಾಹಿತಿ : Indian Post Recruitment 2025

ಆಯ್ಕೆ ವಿಧಾನ : ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,350 ರಿಂದ ರೂ. 58,250 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು

ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ಅಭ್ಯರ್ಥಿಗಳು – ರೂ. 1750
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ, ಪ್ರ1, ಮಹಿಳೆಯರು, ಅಂಗವಿಕಲ ಅಭ್ಯರ್ಥಿಗಳು – ರೂ. 1250

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 20, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 16, 2025
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 17, 2025

Kodagu DCC Bank Recruitment 2025 : Important Links

NOTIFICATIONCLICK HERE
APPLY ONLINECLICK HERE
Telegram Join LinkClick Here
WhatsApp Group LinkClick Here


Spread the love
Scroll to Top