Karnataka High Court Civil Judges Recruitment 2026 : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಗತ್ಯವಿರುವ ಸಿವಿಲ್ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka High Court Civil Judges Recruitment 2026 : Details of Vacancies
ಹುದ್ದೆ :
ಸಿವಿಲ್ ನ್ಯಾಯಾಧೀಶರು
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 90 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಯೋಮಾನ :
• ಎಸ್ಸಿ, ಎಸ್ಟಿ, ಪ್ರವರ್ಗ1 ಅಭ್ಯರ್ಥಿಗಳು – ಗರಿಷ್ಠ 45 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
• ಇತರೆ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 77,840 ರಿಂದ ರೂ. 1,36,520 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಶೈಕ್ಷಣಿಕ ಅರ್ಹತೆ :
- ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿರುವ ಕಾನೂನು ಪದವಿಯನ್ನು ಹೊಂದಿರಬೇಕು.
- ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಅಥವಾ ದೇಶದ ಉಚ್ಛ ನ್ಯಾಯಾಲಯಗಳಲ್ಲಿ ಅಥವಾ ಜಿಲ್ಲಾ ಮತ್ತು ಅಧಿವಿಚಾರಣಾ ನ್ಯಾಯಾಲಯಗಳಲ್ಲಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿರಬೇಕು.
- ಮತ್ತು ಮೂರು ವರ್ಷಗಳಿಗಿಂತ ಕಡಿಮೆಯಲ್ಲದ ಅವಧಿಯವರೆಗೆ ನಿರಂತರವಾಗಿ ವೃತ್ತಿಯನ್ನು ಮಾಡಿರಬೇಕು
- ಅಥವಾ ಕೇಂದ್ರ ಸರ್ಕಾರ ಅಥವಾ ದೇಶದ ರಾಜ್ಯ ಸರ್ಕಾರಗಳ ಪೂರ್ಣಾವಧಿಯ ಉದ್ಯೋಗದಲ್ಲಿ ಸರ್ಕಾರಿ ನ್ಯಾಯವಾದಿಯಾಗಿ ಕೆಲಸ ನಿರ್ವಹಿಸಿರಬೇಕು
- ಮತ್ತು ಮೂರು ವರ್ಷಗಳಿಗಿಂತ ಕಡಿಮೆಯಿಲ್ಲದ ಅವಧಿವರೆಗೆ ಕಾರ್ಯನಿರ್ವಹಿಸಿರಬೇಕು.
ವಯೋಮಿತಿ ಸಡಿಲಿಕೆ :
ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ಇದೆ.
ಆಯ್ಕೆ ವಿಧಾನ :
• ಪೂರ್ವಭಾವಿ ಪರೀಕ್ಷೆ
• ಮುಖ್ಯ ಲಿಖಿತ ಪರೀಕ್ಷೆ
• ಮೌಖಿಕ ಸಂದರ್ಶನ
• ಕಂಪ್ಯೂಟರ್ ಜ್ಞಾನದ ಪರೀಕ್ಷೆ
ನಿಗದಿತ ಪರೀಕ್ಷಾ ಶುಲ್ಕದ ವಿವರ :
ಪೂರ್ವಭಾವಿ ಪರೀಕ್ಷೆ ಶುಲ್ಕ –
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 1000
• ಪ.ಜಾತಿ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳು – ರೂ. 500
ಮುಖ್ಯ ಲಿಖಿತ ಪರೀಕ್ಷೆಗೆ ಅರ್ಹತೆ ಗಳಿಸಿದಲ್ಲಿ ಮುಖ್ಯ ಲಿಖಿತ ಪರೀಕ್ಷೆ ಶುಲ್ಕ –
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 1500
• ಪ.ಜಾತಿ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳು – ರೂ. 750
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 16, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 15, 2026
• ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕ : ಮೇ 15, 2026
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಯು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇ-ಪಾವತಿ ಗೇಟ್ ವೇ ಮೂಲಕ ನಿಗದಿತ ಶುಲ್ಕವನ್ನು ಸಂದಾಯ ಮಾಡತಕ್ಕದ್ದು. ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
Karnataka High Court Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
