KPSC ಇಂದ ಕೃಷಿ ಇಲಾಖೆಯಲ್ಲಿನ ಹುದ್ದೆಗಳ ನೇಮಕಾತಿ 2025 – KPSC Agriculture Department Recruitment 2025

Spread the love

KPSC Agriculture Department Recruitment 2024 : ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿಗಳು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
Instagram Group Join Now
KPSC ಇಂದ ಕೃಷಿ ಇಲಾಖೆಯಲ್ಲಿನ ಹುದ್ದೆಗಳ ನೇಮಕಾತಿ 2025 – KPSC Agriculture Department Recruitment 2025

KPSC Agriculture Department Recruitment 2024 : Details of Vacancies

ಹುದ್ದೆ : ಕೃಷಿ ಅಧಿಕಾರಿಗಳು, ಸಹಾಯಕ ಕೃಷಿ ಅಧಿಕಾರಿಗಳು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 945 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಹುದ್ದೆಉಳಿಕೆ ಮೂಲ ವೃಂದಹೈದ್ರಾಬಾದ್-ಕರ್ನಾಟಕ ವೃಂದ
ಕೃಷಿ ಅಧಿಕಾರಿಗಳು5842
ಸಹಾಯಕ ಕೃಷಿ ಅಧಿಕಾರಿಗಳು586231

ಶೈಕ್ಷಣಿಕ ಅರ್ಹತೆ :
ಶೇ. 85 ರಷ್ಟು ಹುದ್ದೆಗಳಿಗೆ – ಬಿ.ಎಸ್ಸಿ (ಕೃಷಿ) ಅಥವಾ ಬಿ.ಎಸ್ಸಿ (ಆನರ್ಸ್) ಕೃಷಿ ಪದವಿ.
ಶೇ. 15 ರಷ್ಟು ಹುದ್ದೆಗಳಿಗೆ – ಬಿ.ಟೆಕ್ (ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ ಬಿ.ಟೆಕ್ (ಆಹಾರ ತಂತ್ರಜ್ಞಾನ) ಅಥವಾ ಬಿ.ಎಸ್ಸಿ (ಕೃಷಿ ಮಾರುಕಟ್ಟೆ ಮತ್ತು ಸಹಕಾರ) ಅಥವಾ ಬಿ.ಎಸ್ಸಿ (ಆನರ್ಸ್) ಕೃಷಿ ಮಾರಾಟ ಮತ್ತು ಸಹಕಾರ ಅಥವಾ ಬಿ.ಎಸ್ಸಿ (ಆನರ್ಸ್) ಅಗ್ರಿ ಬಿಸಿನೆಸ್ ಮ್ಯಾನೇಜ್ ಮೆಂಟ್ ಅಥವಾ ಬಿ.ಎಸ್ಸಿ (ಕೃಷಿ ಜೈವಿಕ ತಂತ್ರಜ್ಞಾನ) ಅಥವಾ ಬಿ.ಟೆಕ್ (ಜೈವಿಕ ತಂತ್ರಜ್ಞಾನ) ಅಥವಾ ಬಿ.ಎಸ್ಸಿ (ಅಗ್ರಿಕಲ್ಚರಲ್ ಇಂಜಿನಿಯರಿಂಗ್) ಅಥವಾ ಬಿ.ಟೆಕ್ (ಅಗ್ರಿಕಲ್ಚರಲ್ ಇಂಜಿನಿಯರಿಂಗ್).

ಉದ್ಯೋಗ ಮಾಹಿತಿ 10ನೇ,12ನೇ ಪಾಸ್…..299+ ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2025

ವೇತನ :

ಹುದ್ದೆವೇತನ
ಕೃಷಿ ಅಧಿಕಾರಿಗಳು43100-83900
ಸಹಾಯಕ ಕೃಷಿ ಅಧಿಕಾರಿಗಳು40900-78200

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. (ರಾಜ್ಯ ಸರ್ಕಾರವು ದಿನಾಂಕ: 10-09-2024ರಂದು ಜಾರಿ ಮಾಡಿರುವ ಆದೇಶದಲ್ಲಿ ಎಲ್ಲಾ ಪ್ರವರ್ಗಗಳಿಗೆ ಒಂದು ಬಾರಿಗೆ ಅನ್ವಯಿಸುವಂತೆ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆ ನೀಡಿರುತ್ತದೆ. ಅದನ್ನು ಅಳವಡಿಸಿಕೊಂಡ ನಂತರ ಅಭ್ಯರ್ಥಿಗಳು ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು).
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 41 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ

ಆಯ್ಕೆ ವಿಧಾನ : ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು.


ಸೂಚನೆ  ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ (ಶೇ.85ರಷ್ಟು) ಹುದ್ದೆಗಳಿಗೆ ಒಂದು ಹಾಗೂ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ (ಶೇ.15ರಷ್ಟು) ಹುದ್ದೆಗಳಿಗೆ ಒಂದು ನಿರ್ದಿಷ್ಟ ಪತ್ರಿಕೆಯ ಪರೀಕ್ಷೆಯನ್ನು ಹಾಗೂ ಮೇಲ್ಕಂಡ ಎಲ್ಲಾ ಹುದ್ದೆಗಳಿಗೆ ಒಂದೇ ಕನ್ನಡ ಭಾಷಾ ಪರೀಕ್ಷೆ ಮತ್ತು ಸಾಮಾನ್ಯ ಪತ್ರಿಕೆಯ ಪರೀಕ್ಷೆಗಳನ್ನು ನಡೆಸಲಾಗುವುದು.

ಉದ್ಯೋಗ ಮಾಹಿತಿ :RBI Junior Engineer Recruitment 2025/ಆರ್‌ಬಿಐ ಜ್ಯೂನಿಯರ್ ಇಂಜಿನಿಯರ್ ನೇಮಕಾತಿ 2025

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅಭ್ಯರ್ಥಿಗಳು – ರೂ. 600
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
• ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 07, 2024 ಜನವರಿ 03, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 07, 2024 ಫೆಬ್ರವರಿ 01, 2025

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

Karnataka Agriculture Department Recruitment 2024 : Important Links

CORRIGENDUM NOTIFICATION (RPC)CLICK HERE
CORRIGENDUM NOTIFICATION (HK)CLICK HERE
NOTIFICATION (RPC)CLICK HERE
NOTIFICATION (HK)CLICK HERE
APPLY ONLINECLICK HERE ಜನವರಿ 03 ರಿಂದ ಪ್ರಾರಂಭ
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top