SBI Degree Scholarship- ಎಸ್.ಬಿ.ಐ ನಿಂದ ಪದವಿ ವಿದ್ಯಾರ್ಥಿಗಳಿಗೆ ರೂ 75,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಅಹ್ವಾನ!

Spread the love

ಎಸ್‌ಬಿಐ ಫೌಂಡೇಶನ್ ನಿಂದ SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನವನ್ನು(SBI Platinum Jubilee Asha Scholarship 2025) ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ನೆರವನ್ನು ಒದಗಿಸಲು ದೇಶದಲ್ಲಿರುವ ವಿವಿಧ ಸಂಸ್ಥೆಗಳಿಂದ ಸಿ.ಎಸ್.ಆರ್ ಅನುದಾನದಲ್ಲಿ ವಿವಿಧ ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದ್ದು ಇದೇ ಮಾದರಿಯಲ್ಲಿ ಎಸ್‌ಬಿಐ ಫೌಂಡೇಶನ್ ನಿಂದ ಪ್ರಸ್ತುತ SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ(SBI Platinum Jubilee Asha Scholarship ) ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ(SBI Scholarship) ಯೋಜನೆ ಅಡಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ ಪಡೆಯಲು ಅವಶ್ಯವಿರುವ ದಾಖಲಾತಿಗಳೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಈ ಕುರಿತು ಸಂಪೂರ್ಣ ವಿವರವನ್ನು ಈ ಕೆಳಗೆ ಪ್ರಕಟಿಸಲಾಗಿದೆ.

SBI Degree Scholarship- ಎಸ್.ಬಿ.ಐ ನಿಂದ ಪದವಿ ವಿದ್ಯಾರ್ಥಿಗಳಿಗೆ ರೂ 75,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಅಹ್ವಾನ!

SBI Scholarship Amount-ವಿದ್ಯಾರ್ಥಿವೇತನದ ಮೊತ್ತ ಎಷ್ಟು?

ಎಸ್‌ಬಿಐ ಫೌಂಡೇಶನ್ ನಿಂದ SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ ಯೋಜನೆ ಅಡಿಯಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ರೂ 75,000/- ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

Who Can Apply For SBI Scholarship-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

  • ಅರ್ಜಿದಾರರು ಭಾರತೀಯ ಪ್ರಜೆಗಳಾಗಿರಬೇಕು .
  • ಅರ್ಜಿದಾರರು ಇತ್ತೀಚಿನ NIRF ಶ್ರೇಯಾಂಕಗಳ ಪ್ರಕಾರ ಟಾಪ್ 300 ಸಂಸ್ಥೆಗಳಲ್ಲಿ ಪಟ್ಟಿ ಮಾಡಲಾದ ಭಾರತದ ಪ್ರಮುಖ ವಿಶ್ವವಿದ್ಯಾಲಯ/ಕಾಲೇಜಿನಿಂದ (ಯಾವುದೇ ವರ್ಷ) ಪದವಿಪೂರ್ವ ಕೋರ್ಸ್ ಅನ್ನು ಅನುಸರಿಸುತ್ತಿರಬೇಕು.
  • ವಿದ್ಯಾರ್ಥಿಗಳು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ 7 CGPA / 75% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು .
  • ಅರ್ಜಿದಾರರ ಕುಟುಂಬದ ಒಟ್ಟು ವಾರ್ಷಿಕ ಆದಾಯ INR 6,00,000 ವರೆಗೆ ಇರಬೇಕು.
  • ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (NAAC) ನಿಂದ A ಮತ್ತು ಅದಕ್ಕಿಂತ ಹೆಚ್ಚಿನ ಮಾನ್ಯತೆಗಳನ್ನು ಹೊಂದಿರುವ ವಿಶ್ವವಿದ್ಯಾಲಯಗಳು, ಕಾಲೇಜುಗಳು ಅಥವಾ ಶೈಕ್ಷಣಿಕ ಸಂಸ್ಥೆಗಳಿಗೆ ಅಗ್ರ 300 NIRF ಪಟ್ಟಿಗಳಲ್ಲಿ ಸ್ಥಾನ ಪಡೆದಿರುವ ಪ್ರಮುಖ ಶೈಕ್ಷಣಿಕ ಸಂಸ್ಥೆಗಳನ್ನು ಪರಿಗಣಿಸಲಾಗುತ್ತದೆ.
  • SC/ST ವಿದ್ಯಾರ್ಥಿಗಳಿಗೆ ಶೇ.10 ರಷ್ಟು ಸಡಿಲಿಕೆ ಇದೆ (ಅಂಕಗಳ ಶೇಕಡಾವಾರು – 67.50%, CGPA – 6.30).
  • 50% ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ.
  • 50% SC/ST (25% SC, 25% ST) ಗೆ ಮೀಸಲಿಡಲಾಗಿದೆ.
  • ಅರ್ಜಿ ನಮೂನೆಯಲ್ಲಿ ನಿಮ್ಮ ಎಸ್‌ಬಿಐ ಬ್ಯಾಂಕ್ ಖಾತೆಯ ಪಾಸ್‌ಬುಕ್ ಅನ್ನು ಅಪ್‌ಲೋಡ್ ಮಾಡಿ. ನೀವು ಎಸ್‌ಬಿಐ ಬ್ಯಾಂಕ್ ಖಾತೆಯನ್ನು ಹೊಂದಿಲ್ಲದಿದ್ದರೆ, ಅರ್ಜಿಯನ್ನು ಮುಂದುವರಿಸುವ ಮೊದಲು ದಯವಿಟ್ಟು ಒಂದನ್ನು ತೆರೆಯಿರಿ (ಶಾರ್ಟ್‌ಲಿಸ್ಟ್ ಮಾಡಲು ಎಸ್‌ಬಿಐ ಬ್ಯಾಂಕ್ ಖಾತೆಯನ್ನು ಹೊಂದಿರುವುದು ಕಡ್ಡಾಯವಾಗಿದೆ)

SBI Fundation-ಎಸ್‌ಬಿಐ ಫೌಂಡೇಶನ್ ವಿವರ ಹೀಗಿದೆ:

ಎಸ್‌ಬಿಐ ಫೌಂಡೇಶನ್ ಅನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2015 ರಲ್ಲಿ ಕಂಪನಿ ಕಾಯ್ದೆ 2013 ರ ಅಡಿಯಲ್ಲಿ ಸೆಕ್ಷನ್ VIII ಕಂಪನಿಯಾಗಿ ಸ್ಥಾಪನೆ ಮಾಡಲಾಗಿದ್ದು, ಈ ಸಂಸ್ಥೆಯು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಂಗ ಸಂಸ್ಥೆಯಾಗಿದ್ದು ಸಿಎಸ್‌ಆರ್ ಅನುದಾನದಲ್ಲಿ ದೇಶಾದ್ಯಂತ ವಿವಿಧ ಸಾಮಾಜಿಕ ಕಾರ್ಯಗಳಿಗೆ ಅನುದಾನವನ್ನು ಒದಗಿಸುತ್ತದೆ.

ಪ್ರಸ್ತುತ ಎಸ್‌ಬಿಐ ಫೌಂಡೇಶನ್ ವತಿಯಿಂದ ವಿವಿಧ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ಒದಗಿಸಲು ವಿದ್ಯಾರ್ಥಿವೇತನವನ್ನು ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

Last Date For SBI Scholarship-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನವನ್ನು ಪಡೆಯಲು ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು 15 ನವೆಂಬರ್ 2025 ಕೊನೆಯ ದಿನಾಂಕವಾಗಿರುತ್ತದೆ.

SBI Scholarship Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1: ಪ್ರಥಮ ಹಂತದಲ್ಲಿ ಈ “SBI Scholarship Online Application” ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ “www.buddy4study.com” ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಈ ಪೇಜ್ ನಲ್ಲಿ ಕಾಣಿಸುವ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ User ID ಮತ್ತು Password ಅನ್ನು ರಚನೆ ಮಾಡಿಕೊಂಡು ಲಾಗಿನ್ ಅಗಬೇಕು.

Step-3: ಲಾಗಿನ್ ಅದ ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ “Submit” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಪ್ರಮುಖ ಸೂಚನೆಗಳು:
ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top