School Holiday: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆ, ಈ 3 ತಾಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ದಿಢೀರ್ ರಜೆ ಘೋಷಣೆ 2026

Spread the love

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗ್ತಿದೆ. ಮೂಡಿಗೆರೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯ ಆರ್ಭಟ ಜೋರಾಗಿದೆ. ಹೀಗಾಗಿ ರಾಜ್ಯದ ಈ ತಾಲೂಕಿನಲ್ಲಿ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.

WhatsApp Group Join Now
Telegram Group Join Now

ಚಿಕ್ಕಮಗಳೂರು (ಜು.06): ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಳೆಯ (Chikkamalauru Rain) ಆರ್ಭಟ ಜೋರಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿಯೊಂದಿಗೆ ಧಾರಾಕಾರವಾಗಿ ಸುರಿಯುತ್ತಿರುವ ಹಿನ್ನೆಲೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆಗಳಿಗೆ (School) ರಜೆ ಘೋಷಣೆ ಮಾಡಲಾಗಿದೆ. ಪ್ರೌಢಶಾಲೆ ಹಾಗೂ ಕಾಲೇಜಿಗಳಿಗೆ ಎಂದಿನಂತೆ ತರಗತಿಗಳು ನಡೆಯಲಿದೆ.

ಸಕಲೇಶಪುರ ತಾಲೂಕಿನಲ್ಲೂ ಶಾಲೆಗೆ ರಜೆ
*ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರ ಮಳೆ ಹಿನ್ನೆಲೆ ಸಕಲೇಶಪುರ ತಾಲೂಕಿನ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

*ನಿರಂತರ ಮಳೆ ಹಿನ್ನೆಲೆ  ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

*ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಕೈಗೊಂಡಿದ್ದು, ವಿಪತ್ತು ನಿರ್ವಹಣಾ ಕಾಯ್ದೆ-2005ರಡಿ ಸಕಲೇಶಪುರ ತಹಶೀಲ್ದಾರ್ ಸುಪ್ರಿತಾ ಅವರು ಆದೇಶ ಜಾರಿ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ
*ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗ್ತಿದೆ.

*ಈ ಹಿನ್ನೆಲೆ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಮುಂಗಾರು ಮಳೆಯಾಗ್ತಿರೋ ಹಿನ್ನೆಲೆ ಚಿಕ್ಕಮಗಳೂರಿಗೆ ಪ್ರವಾಸಿಗರ ದಂಡೇ ಹರಿದು ಬರ್ತಿದೆ.

* ಹೀಗಾಗಿ ಪ್ರವಾಸೋದ್ಯಮ ಇಲಾಖೆ ಕೂಡ ಯಾವುದೇ ಅನಾಹುತ ಸಂಭವಿಸದಂತೆ ಎಚ್ಚರಿಕೆ ಕ್ರಮತೆಗೆದುಕೊಳ್ಳಬೇಕಿದೆ.

ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ರಜೆ
*ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಾಳಿ ಸಹಿತ ಭಾರೀ ಮಳೆಯಾಗ್ತಿದೆ.

*ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಹಾಗೀ ಪ್ರಾಥಮಿಕ ಶಾಲೆಗೆ ರಜೆ ಘೋಷಣೆ ಮಾಡಿ ಮೂಡಿಗೆರೆ ತಹಶಿಲ್ದಾರ್ ಅಶ್ವಿನಿ ಆದೇಶ ಹೊರಡಿಸಿದ್ದಾರೆ.

ಹೊಸನಗರ ತಾಲೂಕಿನಲ್ಲಿ ರಜೆ ಘೋಷಣೆ
*ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಭಾರೀ ಮಳೆ  ಆಗ್ತಿರೋ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

*ತಾಲೂಕಿನ ಎಲ್ಲಾ ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ತಹಶೀಲ್ದಾರ್ ಭರತ್ ರಾಜ್ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

ವಾಯುಭಾರತ ಕುಸಿತ, ಕರಾವಳಿ ಭಾಗಕ್ಕೆ ಎಫೆಕ್ಟ್
*ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರತ ಕುಸಿತ ಹಾಗೂ ಅರಬ್ಬೀ ಸಮುದ್ರದಲ್ಲಿ ಟ್ರಫ್ ಉಂಟಾದ ಹಿನ್ನೆಲೆ ರಾಜ್ಯದ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗ್ತಿದೆ. 

*ಇಂದು 11 ಜಿಲ್ಲೆಗಳಿಗೆ ಆರೆಂಜ್ ಹಾಗೂ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಳಗಾವಿಯಲ್ಲೂ ಮಳೆ- ಮಳೆ
*ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಖಾನಾಪುರ ತಾಲೂಕಿನ ಹಬ್ಬಾನಟ್ಟಿ ಮಾರುತಿ ಮಂದಿರ ಮುಳುಗಡೆ ಆಗಿದೆ.

*ಮಲಪ್ರಭಾ ನದಿಯಲ್ಲಿ ಹರಿವು ಹೆಚ್ಚಾಗಿದ್ದು, ದೇವಾಲಯ ನೀರಿನಲ್ಲಿ ಸಂಪೂರ್ಣವಾಗಿ ‌ಮುಳುಗಿದೆ.

*ದೇವಾಲಯದ ಮೇಲ್ಬಾಗದಲ್ಲಿ ಬಂದು ಭಕ್ತರ ದರ್ಶನ ಪಡೆದಿದ್ದು, ಕಣಕುಂಬಿ ಹಾಗೂ ಜಾಂಬೋಟಿ ಭಾಗದಲ್ಲಿ ಭಾರೀ ಮಳೆ ಮುಂದುವರೆದಿದೆ.

ರಾಜ್ಯದ ಹಲವೆಡೆ ಇಂದು ವ್ಯಾಪಕ ಮಳೆ
*ಉತ್ತರ ಕನ್ನಡ, ಉಡುಪಿ, ದಕ್ಷಣಿ ಕನ್ನಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಧಾರವಾಡ, ವಿಜಯಪುರ,  ರಾಯಚೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಮೈಸೂರು, ಮಂಡ್ಯ, ತುಮುಕೂರು, ಹಾವೇರಿ, ದಾವಣಗೆರೆ, ಗದಗ, ಬಳ್ಳಾರಿ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ನೀಡಲಾಗಿದೆ.

30-40 ಕಿ.ಮೀ ವೇಗದಲ್ಲಿ ಗಾಳಿ
*ಗಾಳಿಯ ವೇಗವು ಗಂಟೆಗೆ 30-40 ಕಿಲೋ ಮೀಟರ್​ ವೇಗದಲ್ಲಿ ಬೀಸುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಿದೆ.

*ಇಂದು ಬೆಂಗಳೂರಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.

ಪ್ರಮುಖ ಸೂಚನೆಗಳು:ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top